ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಗೆ ಗೆಲುವು
Update: 2021-12-14 13:44 IST
ಧಾರವಾಡ: ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿಯ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮೊದಲ ಪ್ರಾಶಸ್ತ್ಯದಲ್ಲಿ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ 3,334 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ 2,497 ಮತಗಳನ್ನು ಪಡೆದುಕೊಂಡಿದ್ದಾರೆ.
ಒಟ್ಟು 7080 ಮತಗಳು ಚಲಾವಣೆಯಾಗಿದ್ದು, 370 ಮತಗಳು ತಿರಸ್ಕೃತಗೊಂಡಿದೆ.