ವಿಧಾನಪರಿಷತ್ ಚುನಾವಣೆ: ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಿಮ್ಮಯ್ಯಗೆ ಗೆಲುವು
ಮೈಸೂರು: ಸ್ಥಳೀಯ ಸಂಸ್ಥೆಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಜಿಲ್ಲೆಗಳ ದ್ವಿಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ನ ಡಾ.ಡಿ.ತಿಮ್ಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೈಸೂರು-ಚಾಮರಾಜನಗರ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ2867 ಮತಗಳನ್ನು ಪಡೆಯುವ ಮೂಲಕ ವಿಜಯ ಸಾಧಿಸಿದ್ದರಾದರೂ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಇನ್ನೂ ಎರಡನೇ ಪ್ರಾಶಸ್ತ್ಯದ ಮತಗಳನ್ನು ಪಡೆದಿರುವ ಬಿಜೆಪಿಯ ರಘು ಕೌಟಿಲ್ಯ ಮತ್ತು ಜೆಡಿಎಸ್ ನ ಸಿ.ಎನ್.ಮಂಜೇಗೌಡ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿದೆಯಾದರೂ ಬಿಜೆಪಿಯ ರಘು ಕೌಟಿಲ್ಯ ಮುನ್ನಡೆ ಸಾಧಿಸಿದ್ದಾರೆ.
ನಗರದ ಪಡುವಾರಹಳ್ಳಿಯಲ್ಲಿರುವ ಮಹರಾಣಿ ವಾಣಿಜ್ಯ ಮತ್ತು ಕಲಾ ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ ಕಾರ್ಯ ಬಹಳ ಬಿರುಸಿನಿಂದ ಸಾಗುತ್ತಿದೆಯಾದರೂ ಮೊದಲ ಮತ್ತು ಎರಡನೇ ಪ್ರಾಶಸ್ತ್ಯ ಮತಗಳ ಎಣಿಕೆ ಮಾಡಬೇಕಿರುವುದರಿಂದ ಸ್ವಲ್ಪ ವಿಳಂಭವಾಗುತ್ತಿದೆ.
ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋನಲ್ ಸ್ಥಳದಲ್ಲೇ ಇದ್ದು ಎಲ್ಲಾ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನು ಚುನಾವಣಾ ವೀಕ್ಷಕ ಡಾ.ಅಜಯ್ ನಾಗಭೂಷಣ್ ಚುನಾವಣಾ ನೇತೃತ್ವವನ್ನು ನೀಡಿಕೊಳ್ಳುತ್ತಿದ್ದಾರೆ.