×
Ad

ಮಂಗಳೂರು: ಡಿ.17ರಿಂದ ಕಾಲು ಬಾಯಿ ಜ್ವರಕ್ಕೆ ಉಚಿತ ಲಸಿಕೆ

Update: 2021-12-14 18:08 IST

ಮಂಗಳೂರು: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ದ.ಕ.ಜಿಲ್ಲಾಡಳಿತ, ಜಿಪಂ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಜಿಲ್ಲಾದ್ಯಂತ ಡಿ.17ರಿಂದ ಜನವರಿ 15 ರವರೆಗೆ ಕಾಲು ಬಾಯಿ ಜ್ವರದ ಉಚಿತ ಲಸಿಕೆಯ 2ನೇ ಸುತ್ತಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಜಿಲ್ಲೆಯ 2,50,569 ದನ, 1,832 ಎಮ್ಮೆ ಸಹಿತ 2,52,401 ಜಾನುವಾರುಗಳಿಗೆ ಕಾಲು ಬಾಯಿ ಜ್ವರರೋಗದ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ 38 ತಂಡಗಳನ್ನು ರಚಿಸಲಾಗಿದೆ. ನಿಗದಿತ ದಿನದಂದು ರೈತರು ತಮ್ಮ ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ ಲಸಿಕೆ ಹಾಕಲು ಸಹರಿಸಬೇಕು ಎಂದು ಪಶುಪಾಲನಾ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News