×
Ad

ಉಡುಪಿ: ಡಿ.15ರಂದು ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಪ್ರಮುಖರ ಸಮಾವೇಶ

Update: 2021-12-14 19:32 IST

ಉಡುಪಿ, ಡಿ.14: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವೊಂದು ನಾಳೆ ಡಿ.15ರಂದು ಬೆಳಗ್ಗೆ 10ರಿಂದ ಉಡುಪಿ ಅಜ್ಜರಕಾಡಿ ನಲ್ಲಿುವ ಪುರಭವನದಲ್ಲಿ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಳಗ್ಗೆ 10:30ಕ್ಕೆ ಸಮಾವೇಶ ಉದ್ಘಾಟನೆಗೊಳ್ಳಲಿದೆ. 11:00ಕ್ಕೆ ಬಿ.ಎಲ್. ಸಂತೋಷ್ ಅವರಿಂದ ದಿಕ್ಸೂಚಿ ಭಾಷಣ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News