ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ, ಮತದಾರರ ಚೀಟಿ, ಆಧಾರ್ ಕಾರ್ಡ್ ನೀಡಿ: ಸುಪ್ರೀಂ ಕೋರ್ಟ್

Update: 2021-12-14 18:23 GMT

ಹೊಸದಿಲ್ಲಿ, ಡಿ. 14: ಲೈಂಗಿಕ ಕಾರ್ಯಕರ್ತೆಯೆರಿಗೆ ಪಡಿತರ, ಮತದಾರರ ಚೀಟಿ ಹಾಗೂ ಆಧಾರ್ ಕಾರ್ಡ್ಗಳನ್ನು ನೀಡುವಂತೆ ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ಲೈಂಗಿಕ ಕಾರ್ಯಕರ್ತೆಯರು ಎದುರಿಸಿದ ಸಮಸ್ಯೆಗಳ ಬಗ್ಗೆ ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ಜಾರಿ ಮಾಡಿತು. 

ಸುಪ್ರೀಂ ಕೋರ್ಟ್ ಕಳೆದ ವರ್ಷ ಸೆಪ್ಟಂಬರ್ 29ರಂದು ಲೈಂಗಿಕ ಕಾರ್ಯಕರ್ತೆಯರಿಗೆ ಗುರುತು ಪತ್ರವಿಲ್ಲದೇ ಬೇಳೆಕಾಳುಗಳು ಹಾಗೂ ದವಸ ಧಾನ್ಯಗಳನ್ನು ಪೂರೈಸುವಂತೆ ಕೇಂದ್ರ ಸರಕಾರ ಹಾಗೂ ಇತರರಿಗೆ ಸೂಚಿಸಿತ್ತು. ‘‘ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಚೀಟಿ ಹಾಗೂ ಮತದಾರರ ಗುರುತು ಪತ್ರ ನೀಡುವಂತೆ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ದಶಕಗಳೇ ಹಿಂದೆಯೇ ನಿರ್ದೇಶಿಸಿತ್ತು. ಆದರೆ, ಈ ನಿರ್ದೇಶನವನ್ನು ಇದುವರೆಗೆ ಅನುಷ್ಠಾನಗೊಳಿಸದಿರದೇ ಇರುವುದಕ್ಕೆ ಯಾವುದೇ ಕಾರಣ ಇಲ್ಲ’’ ಎಂದು ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಬಿ.ಆರ್. ಗವಾಯಿ ಹಾಗೂ ಬಿ.ವಿ. ನಾಗರತ್ನ ಅವರನ್ನು ಒಳೊಂಡ ಪೀಠ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News