×
Ad

ಡಿ. 17ರಂದು ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕೃತರಿಗೆ ಸನ್ಮಾನ

Update: 2021-12-15 12:23 IST

ಮಂಗಳೂರು, ಡಿ.15: ಮರಣೋತ್ತರ ಪದ್ಮವಿಭೂಷಣ ಪುರಸ್ಕೃತ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಹಾಗೂ ಡಾ. ಬಿ.ಎಂ.ಹೆಗ್ಡೆ ಮತ್ತು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಬಿ ಹ್ಯೂಮನ್ ವತಿಯಿಂದ ಡಿ.17ರಂದು ಸಂಜೆ 6:30ಕ್ಕೆ ಮಂಗಳೂರು ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಶ್ವೇಶ ತೀರ್ಥ ಸ್ವಾಮೀಜಿ ಪರವಾಗಿ ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ಸನ್ಮಾನ ಸ್ವಿಕರಿಸಲಿದ್ದಾರೆ. ಬಿ ಹ್ಯೂಮನ್ ಮಂಗಳೂರು ಘಟಕಾಧ್ಯಕ್ಷ ಮುಹಮ್ಮದ್ ಅಮೀನ್ ಎಚ್.ಎಚ್. ಅಧ್ಯಕ್ಷತೆ ವಹಿಸುವರು.
 ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ಯು.ಟಿ.ಖಾದರ್, ವೇದವ್ಯಾಸ ಕಾಮತ್, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಬಿ.ಎಂ.ಫಾರೂಕ್, ಮಾಜಿ ಶಾಸಕ ಐವನ್ ಡಿಸೋಜ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ಡಿಸಿಪಿ ಹರಿರಾಮ್ ಶಂಕರ್, ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಪಿಆರ್‌ಒ ರಾಯ್ ಕ್ಯಾಸ್ಟಲಿನೊ,ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಹಿದಾಯ ಫೌಂಡೇಶನ್ ಅಧ್ಯಕ್ಷ ಮನ್ಸೂರ್ ಅಹ್ಮದ್ ಆಝಾದ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News