ಮುಸ್ಲಿಂ ಸೆಂಟ್ರಲ್ ಕಮಿಟಿ ಸಭೆ
ಮಂಗಳೂರು, ಡಿ.15: ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳ ಸಭೆಯು ಬುಧವಾರ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಕೋಮುವಾದಿ ಸಂಘಟನೆಗಳು ಕಾನೂನನ್ನು ಕೈಗೆತ್ತಿಕೊಂಡು ಅಮಾಯಕ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆಸುವುದು ಹಾಗೂ ಉದ್ರೇಕಕಾರಿ ಭಾಷಣ ಮಾಡಿ ಜಿಲ್ಲೆಯಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುವುದನ್ನು ತಕ್ಷಣದಿಂದ ನಿಲ್ಲಿಸುವಂತೆ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖಾ ಕಾರ್ಯದರ್ಶಿಗಳಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಅಲ್ಲದೆ ಸಂವಿಧಾನಬದ್ಧವಾಗಿ ಎಲ್ಲಾ ಧರ್ಮಗಳಿಗೆ ನೀಡಲಾದ ಧಾರ್ಮಿಕ ಸ್ವಾತಂತ್ರಕ್ಕೆ ಧಕ್ಕೆ ತಾರದಂತೆ ಎಲ್ಲಾ ಸಮುದಾಯ ದವರು ಸಹಕರಿಸುವಂತೆ ಮನವಿ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಇಮ್ತಿಯಾಝ್ ಅಹ್ಮದ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ಸಿತಾರ್, ಯು.ಬಿ. ಸಲೀಂ, ಡಾ.ಮುಹಮ್ಮದ್ ಆರೀಫ್ ಮಸೂದ್, ಅಹ್ಮದ್ ಬಾವ ಪಡೀಲ್, ಎನ್.ಕೆ. ಅಬೂಬಕ್ಕರ್, ಸಿ.ಎಂ. ಮುಸ್ತಫಾ, ಎಂ.ಎ. ಅಶ್ರಫ್, ಅಬೀದ್ ಜಲಿಹಾಲ್, ಡಿ.ಎಂ. ಅಸ್ಲಂ, ಹಾಜಿ ಮುಹಮ್ಮದ್ ಬಪ್ಪಳಿಗೆ, ಸಿ.ಎಂ. ಹನೀಫ್, ಮೊಯಿದಿನ್ ಮೋನು, ಖಲೀಲ್ ಅಹ್ಮದ್ ಉಡುಪಿ, ಅಬ್ದುಲ್ ಖಾದರ್ ವಿಟ್ಲ, ನೂರುದ್ದೀನ್ ಸಾಲ್ಮರ ಉಪಸ್ಥಿತರಿದ್ದರು.