×
Ad

ಅಬ್ಬಕ್ಕ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2021-12-15 19:41 IST

ಮಂಗಳೂರು, ಡಿ.15: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಹಾಗೂ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಡಿ.21ರಂದು ಉಳ್ಳಾಲದಲ್ಲಿ ನಡೆಯಲಿರುವ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮುಲ್ಕಿ ಸೀಮೆಯ ಅರಸ ಎಂ. ದುಗ್ಗಣ್ಣ ಸಾವಂತ ತುಳು ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಗೊಳಿಸಿದರು.

ಬಳಿಕ ಮಾತನಾಡಿದ ಅವರು ಉಳ್ಳಾಲದ ವೀರರಾಣಿ ಅಬ್ಬಕ್ಕನ ಹೋರಾಟದ ಕಿಚ್ಚು ದೇಶದ ಸ್ವಾತಂತ್ರ್ಯ ಸಂಗ್ರಾಮದ ಮುನ್ನುಡಿಯಾಗಿದೆ. ಮಹಿಳೆಯಾದರೂ ಆಕೆಯ ಧೈರ್ಯ ಸಾಹಸವನ್ನು ಎಂದಿಗೂ ಮರೆಯಬಾರದು. ಆಕೆಯ ನೈಜ ಸ್ವಾತಂತ್ರ್ಯದ ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಬಹುದೊಡ್ಡ ಜವಬ್ದಾರಿ ನಮ್ಮದಾಗಿದೆ ಎಂದರು.

ತುಳು ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಸ್ವಾಗತಾಧ್ಯಕ್ಷ ಜಯರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಮೂಲ್ಕಿ ಅರಮನೆಯ ಗೌತಮ್ ಜೈನ್, ಸಾಹಿತಿ ಯೋಗೀಶ್ ಕಾಂಚನ್, ಅಕಾಡಮಿಯ ಸದಸ್ಯರಾದ ನಾಗೇಶ್ ಕುಲಾಲ್, ಸಂತೋಷ್ ಪೂಜಾರಿ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ ವಂದಿಸಿದರು, ಅಕಾಡಮಿಯ ಸದಸ್ಯ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News