×
Ad

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

Update: 2021-12-15 20:14 IST

ಉಡುಪಿ, ಡಿ.15: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಪೆಟ್) ವಿವಿಧ ವೃತ್ತಿಪರ ಯೋಜನೆಯಡಿ 03 ಮತ್ತು 06 ತಿಂಗಳ ಅವಧಿಯ ಆಟೋಮೊಬೈಲ್, ಕೃಷಿ, ಆರೋಗ್ಯ, ಶಿಕ್ಷಣ, ಸಾರಿಗೆ, ವಿದ್ಯುನ್ಮಾನ ಮುಂತಾದ ಕ್ಷೇತ್ರಗಳಲ್ಲಿ ಬಳಸುವಂತಹ ಆಧುನಿಕ ವಿನ್ಯಾಸದ ಪಾಲೀಮರ್, ಪ್ಲಾಸ್ಟಿಕ್ ವಸ್ತುಗಳ ತಯಾರಿಕಾ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್‌ನ ಮರುಬಳಕೆ ಕುರಿತು ಸಂಸ್ಥೆಯಲ್ಲಿ ಉಚಿತ ತರಬೇತಿ ನೀಡುತ್ತಿದ್ದು, ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸೆಂಟ್ರಲ್ ಇನ್‌ ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು ಮೊ.ನಂ:7259622928, 9845873498, 9066648466 ಅಥವಾ ದೂರವಾಣಿ ಸಂಖ್ಯೆ: 0821-2510619 ಅನ್ನು ಸಂಪರ್ಕಿಸುವಂತೆ ಸಿಪೆಟ್ ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.­

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News