ಡಿ.17ರಂದು ಆಶಾ ಕಾರ್ಯಕರ್ತೆಯರ ಸಮಾವೇಶ
Update: 2021-12-15 21:50 IST
ಉಡುಪಿ, ಡಿ.15: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಸಮಾವೇಶ ಡಿ.17ರ ಬೆಳಗ್ಗೆ 10 ರಿಂದ ಉಡುಪಿ ಬನ್ನಂಜೆಯಲ್ಲಿರುವ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ಬಗ್ಗೆ ಚರ್ಚೆ ಹಾಗೂ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆಯು ನಡೆಯಲಿದೆ ಎಂದು ಜಿಲ್ಲಾ ಸಂಘದ ಪ್ರಕಟಣೆ ತಿಳಿಸಿದೆ.