×
Ad

ಡೊಮಿನಿಕನ್ ರಿಪಬ್ಲಿಕ್ :ವಿಮಾನ ಪತನ, 9 ಮಂದಿ ಮೃತ್ಯು

Update: 2021-12-16 09:49 IST

ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೊ ಡೊಮಿಂಗೊದಲ್ಲಿರುವ ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಖಾಸಗಿ ವಿಮಾನ  ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಹೆಲಿಡೋಸ ಏವಿಯೇಶನ್ ಗ್ರೂಪ್ ವಿಮಾನಯಾನ ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

ಫ್ಲೋರಿಡಾಗೆ ಹೊರಟ ವಿಮಾನವು ಟೇಕ್ ಆಫ್ ಆದ 15 ನಿಮಿಷಗಳಲ್ಲಿ ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಘಟನೆಯಲ್ಲಿ 7 ಪ್ರಯಾಣಿಕರು  ಹಾಗೂ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News