×
Ad

ಡಿ. 18ರಂದು ಬಡಗಬೆಳ್ಳೂರು ಶಾಲಾ ಶತಮಾನೋತ್ಸವ ಸಮಾರಂಭ

Update: 2021-12-16 16:08 IST

ಬಂಟ್ವಾಳ : ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಟ್ಟಡ ಉದ್ಘಾಟನೆ ಮತ್ತು ಶತಮಾನೋತ್ಸವ ಸಮಾರಂಭವು ಡಿ. 18ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಶತಮಾನೋತ್ಸವ ಕಟ್ಟಡವನ್ನು ಕರ್ಣಾಟಕ ಬ್ಯಾಂಕ್‍ನ ಬ್ಯುಸಿನೆಸ್ ಆಫೀಸರ್ ಗೋಕುಲ್‍ದಾಸ್ ಪೈ ಅವರು ಉದ್ಘಾಟಿಸಲಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಾಣಗೊಂಡ ಶಾಲಾ ಆವರಣಗೋಡೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ  ರಮೇಶ್ಚಂದ್ರ ಭಂಡಾರಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಪ್ರಸನ್ನ ಕುಮಾರ್ ಶೆಟ್ಟಿ ಉಳಿಪಾಡಿ ಗುತ್ತು ಅವರು ಚಾಲನೆ ನೀಡಲಿದ್ದು, ಬಳಿಕ ಕೊಡ್ಮಾನ್‍ ಗುತ್ತು ಮಂಜಯ್ಯ ಶೆಟ್ಟಿ - ಉಳಿಪಾಡಿಗುತ್ತು ಕುಸುಮ ಎಂ. ಶೆಟ್ಟಿ ಅವರ ಭಾವಚಿತ್ರವನ್ನು ಅವರು ಅನಾವರಣಗೊಳಿಸಲಿದ್ದಾರೆ.

ಶತಮಾನೋತ್ಸವ ಕಟ್ಟಡಕ್ಕೆ ದಾನ ನೀಡಿದ ದಾನಿಗಳ ಫಲಕವನ್ನು ಮಾಜಿ ಸಚಿವ ರಮಾನಾಥ ರೈ ಬೆಳ್ಳಿಪ್ಪಾಡಿ ಅವರು ಅನಾವರಣಗೊಳಿಸಲಿದ್ದಾರೆ. ಶತಮಾನೋತ್ಸವದ ನೆನಪಿಗಾಗಿ ಹೊರತಂದಿರುವ ಸ್ಮರಣ ಸಂಚಿಕೆ “ಸ್ಮರಣಾಂಜಲಿ”ಯನ್ನು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಯೋಗೀಶ್ ಕೈರೋಡಿ ಅವರು ಅನಾವರಣಗೊಳಿಸಲಿದ್ದಾರೆ.

ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಉದ್ಯಮಿ ಕೂರಿಯಾಳಗುತ್ತು ಮುಂಡಪ್ಪ ಪಯ್ಯಡೆ, ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಪ್ರಕಾಶ್ ಆಳ್ಬ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಭಾಗವಹಿಸಲಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯ ಕೆ.ಕೇಶವ ನಾಯ್ಕ್,  ಶಾಲಾ ಸಂಚಾಲಕರಾದ ಕೆ. ನರೇಂದ್ರನಾಥ ಭಂಡಾರಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಸುಧಾಕರ ಪೂಂಜ, ಶತಮಾನೋತ್ಸವ ಕಟ್ಟಡ ಸಮಿತಿ ಗೌರವಾಧ್ಯಕ್ಷರಾದ  ರಘು ಎಲ್.ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಚೀಂದ್ರನಾಥ ರೈ,  ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ ರಮೇಶ್ಚಂದ್ರ ಭಂಡಾರಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ  4ಕ್ಕೆ ಶ್ರೀ ವಿಠಲ್ ನಾಯಕ್ ಮತ್ತು ಬಳಗ ಕಲ್ಲಡ್ಕ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ರಾತ್ರಿ 8.30ಕ್ಕೆ ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದ `ಕುಸಲ್ದರಸೆ' ನವೀನ್ ಡಿ. ಪಡೀಲ್ ಇವರ ಸಲಹೆ ಸಹಕಾರದೊಂದಿಗೆ ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ `ರಂಗ್‍ದ ರಾಜೆ' ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ. ಬಳಿಕ ಶಾಲೆಯಿಂದ ನಿವೃತ್ತರಾದ ಏಳು ಶಿಕ್ಷಕರನ್ನು ಸನ್ಮಾನಿಸಲಾಗುವುದು.

ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು 1920ರಲ್ಲಿ ಸ್ಥಾಪನೆಯಾಗಿತ್ತು. 1923ರಲ್ಲಿ ಸರಕಾರದ ಮಾನ್ಯತೆಯನ್ನು ಪಡೆದುಕೊಂಡಿರುತ್ತದೆ. 2020ರ ವೇಳೆಗೆ ಶಾಲೆ ಸ್ಥಾಪನೆಗೊಂಡು 100 ವರ್ಷ ಪೂರೈಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News