ತಿರುಚಿದ ವೀಡಿಯೋ ವೈರಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು; ಸಿ.ಎಂ.ಇಬ್ರಾಹಿಮ್
Update: 2021-12-16 17:29 IST
ಬೆಳಗಾವಿ, ಡಿ.16: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿನ ಸಂಭಾಷಣೆಯನ್ನು ತಪ್ಪಾಗಿ ಅರ್ಥೈಯಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗುವುದು ಎಂದು ವಿಧಾನ ಪರಿಷತ್ತಿನ ಸದಸ್ಯ ಸಿ.ಎಂ.ಇಬ್ರಾಹಿಮ್ ಹೇಳಿದರು.
ಗುರುವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ನನ್ನ ನಡುವೆ ನಡೆದ ಸಂಭಾಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಂಚಿಕೊಂಡಿದ್ದೆ. ಆದರೆ, ಇದನ್ನೆ ತಪ್ಪಾಗಿ ಅರ್ಥೈಯಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ಬಗ್ಗೆ ದೂರು ನೀಡಲಾಗುವುದು ಎಂದರು.
ಇದೊಂದು ನೀಚ ಕೆಲಸವಾಗಿದೆ. ಅಷ್ಟೇ ಅಲ್ಲದೆ, ಯಾರಿಗೆ ಎದುರಿಗೆ ಬಂದು ಹೋರಾಟ ಮಾಡಲು ಶಕ್ತಿ ಇಲ್ಲವೋ ಅವರು ಇಂತಹ ಕೃತ್ಯವೆಸಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.