ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಹೊಂದಾಣಿಕೆ: ಲಖನ್ ಜಾರಕಿಹೊಳಿ ಆರೋಪ
Update: 2021-12-16 18:13 IST
ಬೆಳಗಾವಿ, ಡಿ.16: ಜಿಲ್ಲೆಯ ಸ್ವಯಂ ಘೋಷಿತ ಕಾಂಗ್ರೆಸ್ ನಾಯಕರು, ಬಿಜೆಪಿಯ ನಾಯಕರು ಜೊತೆಯಾಗಿದ್ದಾರೆ ಎಂದು ವಿಧಾನ ಪರಿಷತ್ತಿನ ವಿಜೇತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಆರೋಪಿಸಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರೇ ಹೊಂದಾಣಿಕೆ ಮಾಡಿಕೊಂಡು ಈಗ ಬೇರೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ. ಅಲ್ಲದೆ, ಬಿಜೆಪಿಯ ನಾಯಕರು ಕಾಂಗ್ರೆಸ್‍ನವರ ಜತೆ ಸೇರಿ ರಹಸ್ಯ ಸಭೆ ಮಾಡಿದ್ದರು. ಹೀಗಾಗಿ ಬಿಜೆಪಿ ಮತಗಳು ಕಾಂಗ್ರೆಸ್‍ಗೆ ಹೋದವು ಎಂದರು.
ಬಿಜೆಪಿ ಸೇರುವ ವಿಚಾರಕ್ಕೆ, ನಾನು ನಮ್ಮ ನಾಯಕರ ಜತೆಗೆ ಚರ್ಚೆ ಮಾಡುತ್ತೇನೆ. ರಮೇಶ್, ಬಾಲಚಂದ್ರ ನನ್ನ ಪರವಾಗಿ ಪ್ರಚಾರ ಮಾಡಿದ್ದರೆ, ನಾನು ಮೊದಲ ಪ್ರಾಶಸ್ತ್ಯದಲ್ಲೇ ಗೆಲ್ಲುತ್ತಿದ್ದೆ. ಅವರು ನಿಷ್ಠಾವಂತರಾಗಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದೂ ಅವರು ಹೇಳಿದರು.