×
Ad

ಮಂಗಳೂರು: ಚಿನ್ನ ಅಕ್ರಮ ಸಾಗಾಟಕ್ಕೆ ಯತ್ನ

Update: 2021-12-16 18:38 IST

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಮಹಿಳಾ ಪ್ರಯಾಣಿಕರೊಬ್ಬರಿಂದ ಸುಮಾರು 739 ಗ್ರಾಂ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.

ದುಬೈಯಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಕಾಸರಗೋಡು ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ ಸುಮಾರು  36 ಲಕ್ಷ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿನ್ನದ ಪೇಸ್ಟ್ ಅನ್ನು ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News