ಉಡುಪಿ: ಡಿ.20ಕ್ಕೆ ಕಸಾಪ ರಾಜ್ಯಾಧ್ಯಕ್ಷರಿಗೆ ಅಭಿನಂದನೆ
ಉಡುಪಿ, ಡಿ.16: ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ಅಭಿನಂದನಾ ಸಮಾರಂಭ ಹಾಗು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇವರ ಸೇವಾ ಸ್ವೀಕಾರ ಸಮಾರಂಭ ಡಿ.20ರ ಸೋಮವಾರ ಅಪರಾಹ್ನ 2:00ಗಂಟೆಗೆ ಅಜ್ಜರಕಾಡಿನಲ್ಲಿರುವ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥು ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಅತಿಥಿಗಳಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಕಾಲೇಜಿನ ಪ್ರಾಂಶುಪಾಲ ರಾದ ಡಾ. ಭಾಸ್ಕರ ಶೆಟ್ಟಿ ಎಸ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಭಾಗವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕದ ನಿಕಟ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಗೌರವ ಕಾರ್ಯದರ್ಶಿ ಗಳಾದ ಸುಬ್ರಹ್ಮಣ್ಯ ಶೆಟ್ಟಿ ಕೋಟೇಶ್ವರ ಹಾಗು ನರೇಂದ್ರ ಕುಮಾರ್ ಕೋಟ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.