ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ಪ್ರತಿಭಟನೆ
Update: 2021-12-16 21:31 IST
ಬೆಳಗಾವಿ, ಡಿ.16: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು.
ಗುರುವಾರ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿಜಮಾಯಿಸಿದ ಪ್ರತಿಭಟನೆ ನಡೆಸಿದ ಹೋರಾಟಗಾರರು, ನಾಗಮೋಹನ್ ದಾಸ್ ವರದಿ ಜಾರಿ ಹಾಗೂ ಶೇ.7.5 ಮೀಸಲಾತಿಗೆ ಆಗ್ರಹಿಸಿದರು.
ಬಳಿಕ ರಾಷ್ಟ್ರೀಯ ಹೆದ್ದಾರಿ ಬಂದ್‍ಗೆ ಮುಂದಾದ ವೇಳೆ ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ವಾಗ್ವಾದ ನಡೆಯಿತು. ಆನಂತರ ಪೊಲೀಸರು ವಶಕ್ಕೆ ಪಡೆದರು.