ಡಿ. 26 : ಕುಕ್ಕುಂದೂರಿನಲ್ಲಿ ಕಣ್ಣಿನ ಉಚಿತ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷಾ ಶಿಬಿರ
ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್, ಕುಕ್ಕುಂದೂರು-ಮುಂಬೈ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ನ್ಯೂಸ್ ಕಾರ್ಕಳ, ಜೆಸಿಐ ಕಾರ್ಕಳ, ಬಿಲ್ಲವ ಸಮಾಜ ಸೇವಾ ಸಂಘ ಕಾರ್ಕಳ, ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿ ನೆಕ್ಲಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇವುಗಳ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಉಡುಪಿ ಇವರ ಆಶ್ರಯದಲ್ಲಿ ಡಿ. 26ರಂದು ಕುಕ್ಕುಂದೂರು ಟಪ್ಪಾಲು ಕಟ್ಟೆ ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಕಣ್ಣಿನ ಉಚಿತ ತಪಾಸಣೆ ಶಿಬಿರ, ನೇತ್ರದಾನ ನೊಂದಣಿ, ರಕ್ತದೊತ್ತಡ ಮತ್ತು ಮಧುಮೇಹ ಪರಿಕ್ಷಾ ಶಿಬಿರ ಕಾರ್ಯಕ್ರಮ ನಡೆಯಲಿದೆ.
ಶಿಬಿರದಲ್ಲಿ ವೈದ್ಯರು ಸೂಚಿಸಿದವರಿಗೆ ಕಣ್ಣಿನ ಪೊರೆಯ ಉಚಿತ ಶಸ್ತ್ರಚಿಕಿತ್ಸೆ, ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ನೀಡಲಾಗುವುದು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.