ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ; ಸಿಎಂ ಬೊಮ್ಮಾಯಿ

Update: 2021-12-16 16:51 GMT

ಬೆಳಗಾವಿ, 16: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ  ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ  ಮಾಧ್ಯಮದವರೊಂದಿಗೆ ಮಾತನಾಡಿದರು.

 ಕೂಡಲಸಂಗಮ  ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ  ಪಂಚಮಸಾಲಿ ಸಮುದಾಯಕ್ಕೆ  2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. 

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ  ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು  ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News