ದಾವಣಗೆರೆ : ಕೆಎಸ್‌ಆರ್‌ಟಿಸಿ ಬಸ್ - ಕಾರು ಮುಖಾಮುಖಿ ಢಿಕ್ಕಿ; ನಾಲ್ವರು ಮೃತ್ಯು
ದಾವಣಗೆರೆ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರು ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಸವಳಂಗ ಸಮೀಪದ ಚಿನ್ನಿಕಟ್ಟೆ ಬಳಿ ನಡೆದಿದೆ.
ಚಿನ್ನಿಕಟ್ಟೆ ಸರ್ಕಲ್ ಸೇತುವೆ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಮೃತಪಟ್ಟು, ಒಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೃತರನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿಯ ದ್ರಾಕ್ಷಿಯಿಣಿ, ಸುಮಾ, ಶಾರದಮ್ಮ ಹಾಗೂ ಕಾರು ಚಾಲಕ ಸುನೀಲ್ ಎಂದು ಗುರುತಿಸಲಾಗಿದೆ.
ಚಿನ್ನಿಕಟ್ಟೆ ಜೋಗದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಕಾರಿನಲ್ಲಿ ದ್ರಾಕ್ಷಿಯಿಣಿ ಮತ್ತಿತರರು ಹೋಗುತ್ತಿದ್ದರೂ ಎನ್ನಲಾಗಿದೆ. ಅಪಘಾತಕ್ಕೊಳಗಾದ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಹೊಡೆದ ಲಾರಿ ಚಾಲಕನೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಂದಿನಿಂದ ಲಾರಿ ಢಿಕ್ಕಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.