×
Ad

ಭೂಕಬಳಿಕೆ ಆರೋಪ: ಸಚಿವ ಬೈರತಿ ಬಸವರಾಜ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

Update: 2021-12-17 16:44 IST

ಬೆಳಗಾವಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ  ಸಚಿವ ಬೈರತಿ ಬಸವರಾಜರಿಂದ ಸಿಎಂ ಬೊಮ್ಮಾಯಿ ರಾಜೀನಾಮೆ ಪಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಈ ಕುರಿತು ಸುವರ್ಣ ವಿಧಾನ ಸೌಧ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  'ಕೆಆರ್ ಪುರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೂ ಕಬಳಿಕೆ ಆರೋಪ ಸಂಬಧ ಬೈರತಿ ಬಸವರಾಜ್ ಸೇರಿ ಐವರಿಗೂ ಸಮನ್ಸ್‌ ಜಾರಿ ಮಾಡಿದೆ. ಐಪಿಸಿ ಸೆಕ್ಷನ್ 420 ಸೇರಿದಂತೆ ಇನ್ನಿತರ ಕಾಯ್ದೆ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಇದು ಜಾಮೀನು ರಹಿತ ಕೇಸ್ ಆಗಿದ್ದು, ಅತ್ಯಂತ ಗಂಭೀರ ಪ್ರಕರಣ ಎಂದು' ಸಿದ್ದರಾಮಯ್ಯ ತಿಳಿಸಿದ್ದಾರೆ.

'ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಬೈರತಿರನ್ನು ಸಂಪುಟದಿಂದ ವಜಾಗೊಳಿಸಲಿ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೈರತಿ ಬಸವರಾಜ್‌ ಆಗ ಸಿದ್ದರಾಮಯ್ಯನ ಶಿಷ್ಯ ಆಗಿರಬಹುದು ಈಗ ಅಲ್ಲ. ಈಗ ಅದನ್ನು ಒಪ್ಪಿಕೊಳ್ಳಲೂ ನಾನು ಸಿದ್ಧನಿಲ್ಲ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News