ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ

Update: 2021-12-17 13:08 GMT

ಬೆಳಗಾವಿ, ಡಿ. 17: ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿಯನ್ವಯ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಲು ಸೂಚಿಸಿ ಶಿಫಾರಸ್ಸು ಮಾಡಲಾಗುವುದು ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಅಮೃತ ಅಯ್ಯಪ್ಪ ದೇಸಾಯಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 1614 ಉದ್ಯೋಗಗಳನ್ನು ನೀಡಲಾಗಿದೆ. ಇವರಲ್ಲಿ 1538 ಜನ ಸ್ಥಳೀಯರಾಗಿದ್ದಾರೆ. ಭೂಮಿ ಕಳೆದುಕೊಂಡ 76 ಜನರು ಇದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿರುವ ರೈತರ ಮಕ್ಕಳ ವಿವರಗಳನ್ನು ನೀಡಿದರೆ ಬೇಲೂರು ಹಾಗೂ ಇತರೆ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಲು ಕೈಗಾರಿಕಾ ಸಂಸ್ಥೆಗಳಿಗೆ ಸೂಚಿಸಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News