×
Ad

ಕ್ರೀಡಾ ವಸತಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

Update: 2021-12-17 20:13 IST

ಉಡುಪಿ, ಡಿ.17: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಜೂನ್ 1ರಿಂದ ಎಂಟನೇ ತರಗತಿ ಪ್ರವೇಶಕ್ಕೆ ಅರ್ಹತೆ ಹೊಂದುವ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಕ್ರೀಡಾ ವಸತಿ ಶಾಲೆ / ನಿಲಯಗಳ ಪ್ರವೇಶದ ಆಯ್ಕೆ ಪ್ರಕ್ರಿಯೆಯು, ಕಾರ್ಕಳ ತಾಲೂಕಿಗೆ ಸಂಬಂಧಿ ಸಿದಂತೆ ಜನವರಿ 3ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ, ಬ್ರಹ್ಮಾವರ, ಕಾಪು ಹಾಗೂ ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಜ.4ರಂದು ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ, ಕುಂದಾಪುರ ತಾಲೂಕಿಗೆ ಸಂಬಂಧಿ ಸಿದಂತೆ ಜ. 5ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ, ಬೈಂದೂರು ತಾಲೂಕಿಗೆ ಸಂಬಂಧಿಸಿದಂತೆ ಜ.6ರಂದು ಸ.ಜೂ.ಕಾ ಎದುರಿನ ಗಾಂಧಿ ಮೈದಾನದಲ್ಲಿ ಹಾಗೂ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ಜ.7ರಂದು ಬೆಳಗ್ಗೆ 10ರಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹಿರಿಯ ವಿಭಾಗದ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ 17 ವರ್ಷದೊಳಗಿನ, ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಹರಾಗಿರುವ ಕ್ರೀಡಾಪಟುಗಳನ್ನು ನೇರವಾಗಿ ವಿಭಾಗ ಮಟ್ಟದಲ್ಲಿ ಆಯ್ಕೆಮಾಡುವುದರಿಂದ, ಆಸಕ್ತರು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ದೃಢೀಕರಿಸಿದ ಜನನ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ: 0820- 2521324, ಮೊ.ನಂ: 9448984729ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News