×
Ad

ಉಡುಪಿ: ಡಿ.19ರಂದು ಅಂತರ್ ಜಿಲ್ಲಾ ಟೆನಿಸ್ ಟೂರ್ನಿ

Update: 2021-12-17 21:29 IST

ಉಡುಪಿ, ಡಿ.17: ಉಡುಪಿ ಜಿಲ್ಲಾ ಲಾನ್‌ಟೆನಿಸ್ ಅಸೋಸಿಯೇಷನ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಪಿಸಿ ಲೇಔಟ್ ಟೆನಿಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರ ಜಿಲ್ಲಾ ಟೆನಿಸ್ ಟೂರ್ನಿ ಡಿ.19ರ ರವಿವಾರ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೂರ್ನಿಯನ್ನು ಬೆಳಗ್ಗೆ 10ಗಂಟೆಗೆ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ ಸಿಇಓ ಡಾ. ನವೀನ್ ಭಟ್ ವೈ, ಮಾಹೆ ವಿವಿ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಎಂ.ಚಂದ್ರಶೇಖರ ಹೆಗ್ಡೆ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲಾ ಲಾನ್‌ಟೆನಿಸ್ ಅಸೋಸಿಯೇಷನ್‌ನ ಅಧ್ಯಕ್ಷ ದೇವಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಸಂಜೆ 5:30ಕ್ಕೆ ನಡೆಯಲಿದೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ತುಮಕೂರು ಚೇಂಬರ್ ಆಫ್ ಕಾಮರ್ಸ್‌ನ ನಿರ್ದೇಶಕ ಸದಾಶಿವ ಅಮೀನ್ ಹಾಗೂ ಕರ್ಣಾಟಕ ಬ್ಯಾಂಕ್‌ನ ಮಾಜಿ ನಿರ್ದೇಶಕ ಡಾ.ರಾಮಮೋಹನ್ ಎಚ್. ಅತಿಥಿಗಳಾಗಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News