ಡಾ. ಬಿ.ಎಂ. ಹೆಗ್ಗಡೆಗೆ ಡಾ. ಅನುಪಮಾ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ
ಮಂಗಳೂರು, ಡಿ.17:ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ.ಬಿ.ಎಂ.ಹೆಗ್ಗಡೆಗೆ ಅವರ ನಿವಾಸದಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ. ಬಿ. ಕಿರಣ್‌ಸಿಂಗ್ ಹಾಗೂ ಪ್ರಾಧಿಕಾರದ ಸದಸ್ಯ ಟಿ.ಎ.ಎನ್. ಖಂಡಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸಿ.ರಾಜೇಶ್ ಹಾಗೂ ಡಾ. ಬಿ.ಎಂ. ಹೆಗ್ಗಡೆಯ ಕುಟುಂಬದ ಸದಸ್ಯರಾದ ಮಂಜುನಾಥ ಹೆಗ್ಡೆ, ಭುವನ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಸಮಾರಂಭ ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಡಾ. ಬಿ.ಎಂ. ಹೆಗ್ಗಡೆ ಅವರು ಆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಪ್ರಾಧಿಕಾರದ ಅಧ್ಯಕ್ಷರು ಮಂಗಳೂರಿಗೆ ಆಮಿಸಿ ಪ್ರಶಸ್ತಿ ಪ್ರದಾನ ಮಾಡಿದರು.