ವಾರಣಾಸಿ: ಪ್ರಧಾನಿ ಮೋದಿ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ ಕಾರ್ಮಿಕ ಆತ್ಮಹತ್ಯೆ
Update: 2021-12-18 12:31 IST
ವಾರಣಾಸಿ: ಡಿಸೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರ ಉದ್ದೇಶಿತ ಕಾರ್ಯಕ್ರಮಕ್ಕಾಗಿ ಸಿದ್ಧತೆಯಲ್ಲಿ ತೊಡಗಿದ್ದ 36 ವರ್ಷದ ಕಾರ್ಮಿಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾಗಿ newindianexpress.com ವರದಿ ಮಾಡಿದೆ.
ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಅಫ್ಜಲ್‌ಪುರ ನಿವಾಸಿ ವಿಕ್ರಮ್ ಅನಾರೋಗ್ಯದ ಕಾರಣ ಖಿನ್ನತೆಗೆ ಒಳಗಾಗಿದ್ದರು. ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಫುಲ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಂಡ್ರಾ ಕಾರ್ಖಿಯಾನ್ವ್‌ನಲ್ಲಿ ಪ್ರಧಾನಿ ರ್ಯಾಲಿಯ ಉದ್ದೇಶಿತ ಸ್ಥಳದಲ್ಲಿ ಅವರು ಕೆಲಸ ಮಾಡುತ್ತಿದ್ದು, ಸ್ಥಳದ ಇನ್ನೊಂದು ಬದಿಯಲ್ಲಿದ್ದ ಕಂಬಕ್ಕೆ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.