×
Ad

ಕ್ರೀಡಾ ಕಾರ್ಯಕ್ರಮದ ವೇದಿಕೆಯಲ್ಲಿ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್

Update: 2021-12-18 13:11 IST

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್‌ಶಿಪ್ ಕಾರ್ಯಕ್ರಮದ ವೇಳೆ ಬಿಜೆಪಿ ಸಂಸದರೊಬ್ಬರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರೂ ಆಗಿರುವ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ವೇದಿಕೆಯಿಂದ ಹೊರಡುವ ಮೊದಲು ಯುವ ಕುಸ್ತಿಪಟುವಿಗೆ  ಎರಡು ಬಾರಿ ಕಪಾಳಕ್ಕೆ ಹೊಡೆಯುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ಲೋಕಸಭೆಯಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರವನ್ನು ಪ್ರತಿನಿಧಿಸುವ ಸಿಂಗ್, ರಾಂಚಿಯ ಶಹೀದ್ ಗಣಪತ್ ರಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ಕಾರ್ಯಕ್ರಮದ ಮೊದಲ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕುಸ್ತಿಪಟು ವಯಸ್ಸು ಮೀರಿದ ಕಾರಣ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ.

ಆದಾಗ್ಯೂ, 15 ವರ್ಷದೊಳಗಿನವರ ಈವೆಂಟ್‌ನಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಆ ಕುಸ್ತಿಪಟು  ಸಿಂಗ್ ಅವರನ್ನು ಒತ್ತಾಯಿಸುತ್ತಲೇ ಇದ್ದರು. ಅದರ ನಂತರ ಸಂಸದರು ತಮ್ಮ ತಾಳ್ಮೆ ಕಳೆದುಕೊಂಡು ಕಪಾಳಮೋಕ್ಷ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News