ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ: ಕೆ.ಎಲ್.ರಾಹುಲ್ ಉಪ ನಾಯಕ

Update: 2021-12-18 12:26 GMT

ಹೊಸದಿಲ್ಲಿ, ಡಿ.18: ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 26ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಓಪನರ್ ಕೆ.ಎಲ್.ರಾಹುಲ್‌ರನ್ನು ಭಾರತ ಕ್ರಿಕೆಟ್ ತಂಡದ ಉಪನಾಯಕನನ್ನಾಗಿ ಶನಿವಾರ ನೇಮಿಸಲಾಗಿದೆ.

ಈ ಸರಣಿಗೆ ರೋಹಿತ್ ಶರ್ಮಾರನ್ನು ಉಪನಾಯಕನನ್ನಾಗಿ ನೇಮಿಸಲಾಗಿತ್ತು. ಆದರೆ ಅವರು ಸ್ನಾಯು ಸೆಳೆತದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ.

29ರ ಹರೆಯದ ರಾಹುಲ್ ಈ ತನಕ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದು 35.16 ಸರಾಸರಿಯಲ್ಲಿ ಆರು ಶತಕಗಳ ಸಹಿತ 2,321 ರನ್ ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಗೆ ಟೆಸ್ಟ್ ತಂಡದ ಉಪನಾಯಕನನ್ನಾಗಿ ಕೆ.ಎಲ್.ರಾಹುಲ್‌ರನ್ನು ನೇಮಿಸಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಬದಲಿಗೆ ರಾಹುಲ್‌ರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯೊಂದರಲ್ಲಿ ತಿಳಿಸಿದೆ.

ರೋಹಿತ್ ಅವರು ಅಜಿಂಕ್ಯ ರಹಾನೆ ಬದಲಿಗೆ ಟೆಸ್ಟ್ ಸರಣಿಗೆ ಉಪ ನಾಯಕನಾಗಿ ನೇಮಕಗೊಂಡಿದ್ದರು. ಆದರೆ ರೋಹಿತ್ ಅವರು ಮುಂಬೈನಲ್ಲಿ ನೆಟ್ ಪ್ರಾಕ್ಟೀಸ್ ನಡೆಸುತ್ತಿದ್ದಾಗಲೇ ಸ್ನಾಯು ಸೆಳೆತಕ್ಕೆ ಒಳಗಾದ ಕಾರಣ 3ರಿಂದ 4ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಾಗಿದೆ. ರಾಹುಲ್ ಅವರು ಸದ್ಯ ಎಲ್ಲ ಮಾದರಿ ಕ್ರಿಕೆಟ್‌ನ ಸ್ಪೆಷಲಿಸ್ಟ್ ಬ್ಯಾಟರ್ ಆಗಿದ್ದಾರೆ. ಹೀಗಾಗಿ ಅವರನ್ನು ಟೆಸ್ಟ್ ಕ್ರಿಕೆಟ್‌ನ ಉಪ ನಾಯಕರನ್ನಾಗಿ ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News