ಆಸ್ಕರಣ್ಣ-ಮಂಜಣ್ಣ ನೆನಪಿನ ನೇತ್ರದಾನ ವಾಗ್ದಾನ ಕಾರ್ಯಕ್ರಮ
ಉದ್ಯಾವರ, ಡಿ.18: ಉದ್ಯಾವರದ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಆಶ್ರಯದಲ್ಲಿ ನೇತ್ರಜ್ಯೋತಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ನೇತ್ರದಾನ ಕೇಂದ್ರ ಮತ್ತು ಪ್ರಸಾದ್ ನೇತ್ರಾಲಯ ಉಡುಪಿ ಸಹಯೋಗದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಆಸ್ಕರ್ ಫೆರ್ನಾಂಡೀಸ್ ಹಾಗೂ ಮಂಜುನಾಥ ಉದ್ಯಾವರ ನೆನಪಿನ ನೇತ್ರದಾನ ವಾಗ್ದಾನ ಕಾರ್ಯಕ್ರಮ ಡಿ.26ರ ಬೆಳಗ್ಗೆ 9:30ರಿಂದ ಅಪರಾಹ್ನ 12:30ರ ತನಕ ಉದ್ಯಾವರ ಮಸೀದಿ ಬಳಿಯ ಸಂಸ್ಥೆಯ ಕಾರ್ಯಾಲಯದಲ್ಲಿ ಜರಗಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಪ್ರಸಾದ್ ನೇತ್ರಾಲಯದ ಮುಖ್ಯಸ್ಥ ಡಾ.ಕೃಷ್ಣ ಪ್ರಸಾದ್ ಕೂಡ್ಲು ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ರಿಯಾಝ್ ಪಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.