ಉಡುಪಿ: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಧನ ವಿತರಣೆ
Update: 2021-12-18 21:02 IST
ಉಡುಪಿ, ಡಿ.18: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ 50,000 ರೂ.ನಂತೆ ಮೃತಪಟ್ಟ ವ್ಯಕ್ತಿಯ ವಾರಸುದಾರರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದ್ದು, ರಾಜ್ಯ ಸರಕಾರದಿಂದ ಬಿಪಿಎಲ್ ಕುಟುಂಬಕ್ಕೆ ನೀಡಲಾಗುವ ಒಂದು ಲಕ್ಷ ರೂ. ಹೆಚ್ಚುವರಿ ಪರಿಹಾರ ಧನದ ಚೆಕ್‌ನ್ನು ಇಂದು ವಿತರಿಸಲಾಯಿತು.
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶಾಸಕ ರಘುಪತಿ ಭಟ್ ಅವರು ಈ ಚೆಕ್‌ಗಳನ್ನು ವಿತರಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 26 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ.ನಂತೆ ಒಟ್ಟು 26 ಲಕ್ಷ ರೂ. ಮೊತ್ತದ ಚೆಕ್‌ಗಳನ್ನು ಸಂತ್ರಸ್ಥ ಕುಟುಂಬಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭೆಯ ಪೌರಾಯುಕ್ತ ಡಾ.ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್ ಹಾಗೂ ನಗರಸಭಾ ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.