ಕೋಡಿ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನಲ್ಲಿ ‘ಬೆಂಕಿ ರಹಿತ ಅಡುಗೆ ಸ್ಪರ್ಧೆ’

Update: 2021-12-18 17:15 GMT

ಕೋಡಿ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಇ.) ಕೋಡಿ ಕುಂದಾಪುರ ಇಲ್ಲಿ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ  ಬೆಂಕಿ ರಹಿತ ಅಡುಗೆ ಸ್ಪರ್ಧೆ (Cook Without Fire)  ಆಯೋಜಿಸಲಾಯಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶಿಸಿದರು. ಒಂದೊಂದು ತಂಡದಲ್ಲಿ 2 ಸ್ಪರ್ಧಿಗಳ ಹಾಗೆ ಒಟ್ಟು 32 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್, ನಿರ್ದೇಶಕರಾದ ದೋಮ ಚಂದ್ರಶೇಖರ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು.  ಪ್ರಾಂಶುಪಾಲರಾದ ಅಶ್ವಿನಿ ಶೆಟ್ಟಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News