ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್: ಮತದಾನ ಆರಂಭ, 21ಕ್ಕೆ ಫಲಿತಾಂಶ

Update: 2021-12-19 05:24 GMT

ಕೋಲ್ಕತ್ತಾ: ಕೋವಿಡ್-19 ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ ರವಿವಾರ ಬೆಳಗ್ಗೆ 7 ಗಂಟೆಗೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ನ (ಕೆಎಂಸಿ) ಎಲ್ಲಾ 144 ವಾರ್ಡ್‌ಗಳಲ್ಲಿ ಮತದಾನ ಆರಂಭವಾಯಿತು.

ಮುಕ್ತ ಹಾಗೂ  ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ನಿಲಂಜನ್ ಸ್ಯಾಂಡಿಲ್ಯ ತಿಳಿಸಿದ್ದಾರೆ.

4,959 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದರು.

ನಗರದಾದ್ಯಂತ ಸುಮಾರು 23,000 ಕೋಲ್ಕತ್ತಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಭದ್ರತಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದಾದ್ಯಂತ ಪ್ರಮುಖ ಸ್ಥಳಗಳಲ್ಲಿ 200 ಕ್ಕೂ ಹೆಚ್ಚು ಪೊಲೀಸ್ ಪಿಕೆಟ್‌ಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸತತ ಮೂರನೇ ಅವಧಿಗೆ ಮಹಾನಗರ ಪಾಲಿಕೆಯನ್ನು  ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದು, ಬಿಜೆಪಿ, ಸಿಪಿಐ(ಎಂ) ಎರಡನೇ ಸ್ಥಾನಕ್ಕೆ ಸ್ಪರ್ಧಿಸಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾನಗರದ ಎಲ್ಲಾ 16 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಜಯಭೇರಿ ಬಾರಿಸಿತ್ತು.

ಡಿಸೆಂಬರ್ 21 ರಂದು ಮತ ಎಣಿಕೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News