×
Ad

ಬಂಟ್ವಾಳ; ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಸೋಫಕ್ಕೆ ಬೆಂಕಿ ಹಚ್ಚಿದ ಪತಿ : ದೂರು

Update: 2021-12-19 23:18 IST

ಬಂಟ್ವಾಳ, ಡಿ.19: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಬಳಿಕ ಮನೆಯಲ್ಲಿದ್ದ ಸೋಫಾಕ್ಕೆ ಬೆಂಕಿ ಹಚ್ಚಿದ್ದಾನೆ ಎನ್ನಲಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ನಡೆದಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಆರೋಪಿ ಗೌಸ್‌ ಜಲಾಲುದ್ದೀನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಫಾತಿಮತ್ ಬುಶ್ರಾ ಅವರನ್ನು ವಿಟ್ಲ ನಿವಾಸಿಯಾದ ಗೌಸ್ ಜಲಾಲುದ್ದಿನ್ ಎಂಬಾತನಿಗೆ ವಿವಾಹ ಮಾಡಿ ಕೊಟ್ಟಿದ್ದು, ಸುಮಾರು ಒಂದು ತಿಂಗಳಿನಿಂದ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಶನಿವಾರ ಮಧ್ಯಾಹ್ನ ಬಾಟ್ಲಿಯಲ್ಲಿ ಇಂಧನವನ್ನು ತಂದ ಗೌಸ್ ಜಲಾಲುದ್ದೀನ್ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕೆಗೆ ಬೆಂಕಿ ಹಚ್ಚುವ ಉದ್ದೇಶದಿಂದ ಮನೆಯಲ್ಲಿದ್ದ ಸೋಫಾಗೆ ಇಂಧನ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ದೂರಲಾಗಿದೆ.

ಬೆಂಕಿಯಿಂದ ಸೋಫಾ, ಹೊದಿಕೆಗಳು, ಅಕ್ಕಿ, ತೆಂಗಿನಕಾಯಿ ಹೊತ್ತಿ ಉರಿದಿದೆ. ಅಲ್ಲದೆ ಈ ಬಗ್ಗೆ ಪ್ರಶ್ನಿಸಿದ ಆಕೆಯ ಸಹೋದರ ಕಬೀರ್ ಗೂ ಹಲ್ಲೆ ನಡೆಸಿ ಗಾಯಗೊಳಿಸಿದ್ದು, ಅವರು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರು ನೀಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News