×
Ad

ಕರವೇ ಕಾರ್ಯಕರ್ತರಿಂದ ಬೆಳಗಾವಿ ಚಲೋ: ಸಚಿವರ ಕಾರಿಗೆ ಮುತ್ತಿಗೆ

Update: 2021-12-20 10:39 IST

ಬೆಳಗಾವಿ: ಎಂಇಎಸ್ ಕಾರ್ಯಕರ್ತರ ಕುಕೃತ್ಯ ಖಂಡಿಸಿ, ಕರವೇ ಕಾರ್ಯಕರ್ತರು ಬೆಂಗಳೂರಿನಿಂದ ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.

ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿಗೆ ತೆರಳಿರುವ ಕರವೇ ಕಾರ್ಯಕರ್ತರು  ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. 

ಇದೇ ವೇಳೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಸುನೀಲ್ ಕುಮಾರ್, ಹಾಲಪ್ಪ ಆಚಾರ್ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ರಾಯಣ್ಣನ ಪ್ರತಿಮೆಗೆ ಅಪಮಾನ ಮಾಡಿದ ಎಂಇಎಸ್‍ನ ಪುಂಡರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

 ರಾಜ್ಯದಲ್ಲಿ ಶಾಂತಿ ಕದಡುವ ಎಂಇಎಸ್ ಅನ್ನು ನಿಷೇಧಿಸಬೇಕು ಎಂದು ಇದೇ ವೇಳೆ ಮುಖಂಡರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News