ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Update: 2021-12-20 18:18 IST
ಬೆಳಗಾವಿ ಸುವರ್ಣವಿಧಾನಸೌಧ, ಡಿ.20: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಮುಂದುವರೆಯಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸೋಮವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬೆಳವಣಿಗೆಗಾಗಿ ಬಸವರಾಜ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ, ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದರು.
ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವುದು ಸರಿಯಲ್ಲ. ಪುಂಡಾಟವನ್ನು ಕಾನೂನು ರೀತಿಯಲ್ಲೇ ಕ್ರಮಕೈಗೊಂಡು ಬಗೆಹರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.