ನಕಲಿ ನಂದಿನಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ: ಸಚಿವ ಎಸ್.ಟಿ. ಸೋಮಶೇಖರ್
Update: 2021-12-20 18:47 IST
ಬೆಳಗಾವಿ, ಡಿ.20: ನಕಲಿ ನಂದಿನಿ ತುಪ್ಪ ತಯಾರಕರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಸೋಮವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ಉತ್ಪಾದನೆ ಮಾಡಿರುವುದು ಪತ್ತೆ ಹಚ್ಚಲಾಗಿದೆ. ಆ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ ಎಂದರು.
ಕರ್ನಾಟಕ ರಾಜ್ಯ ವ್ಯಾಪಿ 18 ಹಾಲು ಉತ್ಪಾದಕ ಯೂನಿಯನ್‍ಗಳಿದ್ದು, ನಿತ್ಯ 100 ಮೆಟ್ರಿಕ್ ಟನ್ ತುಪ್ಪ ಉತ್ಪಾದನೆ ಮಾಡಲಾಗುತ್ತದೆ ಎಂದ ಅವರು, ನಕಲಿ ತುಪ್ಪದ ಬಗ್ಗೆ ಕೆಎಂಎಫ್ ಅಧಿಕಾರಿಗಳಿಗೂ ಜಾಗೃತಿ ಮೂಡಿಸಲು ಸೂಚಿಸಿದ್ದೇವೆ ಎಂದು ಹೇಳಿದರು.