ಉಡುಪಿ : ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡುಬಂದಲ್ಲಿ ಅಧಿಕ ಮೊತ್ತದ ದಂಡ ವಸೂಲಿ
Update: 2021-12-20 20:46 IST
ಉಡುಪಿ, ಡಿ.20: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ, ರಾಜ್ಯ ಸರಕಾರದ ಅರಣ್ಯ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಹಾಗೂ ವ್ಯವಸ್ಥಾಪನೆ ಕಾಯ್ದೆಯನ್ವಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್‌ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ 25,000 ರೂ.ದಿಂದ ಒಂದು ಲಕ್ಷದವರೆಗೆ ದಂಡವನ್ನು ವಿಧಿಸಿ, ಉದ್ದಿಮೆ ಪರವಾನಿಗೆಯನ್ನು ರದ್ದು ಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.