×
Ad

ಸಮುದ್ರ ಕೊರೆತ ಪ್ರತಿಬಂಧಿಸಲು ತಡೆಗೋಡೆ ನಿರ್ಮಾಣಕ್ಕೆ ಕ್ರಮ: ಬಂದರು ಸಚಿವ ಎಸ್.ಅಂಗಾರ

Update: 2021-12-20 23:22 IST

ಬೆಳಗಾವಿ ಸುವರ್ಣವಿಧಾನಸೌಧ, ಡಿ. 20: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಕಾಪು, ಮುಳೂರು, ಉದ್ಯಾಬರ, ಪಡುಬಿದ್ರೆ, ಮಟ್ಟು ಪರಿಸರದಲ್ಲಿ ಸಮುದ್ರ ಕೊರೆತ ಪ್ರತಿಬಂಧಿಸಲು 3,605 ಮೀ ಉದ್ದದ ತಡೆಗೋಡೆ ನಿರ್ಮಾಣಕ್ಕೆ 37ಕೋಟಿ ರೂ.ಮೊತ್ತದ 8 ಕಾಮಗಾರಿಗಳ ಪ್ರಸ್ತಾವನೆ ಸ್ವೀಕರಿಸಿದ್ದು, ಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಬಂದರು ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಭೂಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಬೈರತಿ ಬಸವರಾಜು ವಜಾಕ್ಕೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಪ್ರತಿಭಟನೆ, ಗದ್ದಲದ ಮಧ್ಯೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಲಾಲಾಜಿ ಆರ್.ಮೆಂಡನ್ ಪರವಾಗಿ ಉಮಾನಾಥ್ ಕೋಟ್ಯಾನ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಸದರಿ ಪ್ರಸ್ತಾವನೆ ಪರಿಶೀಲಿಸಿ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಸೂಚಿಸಿದೆ. ಅದರಂತೆ ಇಲಾಖೆಯಿಂದ ಪ್ರಸ್ತಾವನೆಯನ್ನು ಎಸ್‍ಡಿಆರ್ ಎಫ್, ಎನ್‍ಡಿಆರ್ ಎಫ್ ಸೇರಿಸಿ ಅನುದಾನ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಉಡುಪಿ ಜಿಲ್ಲೆ ಕಾಪು ಕ್ಷೇತ್ರ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿ 1,575 ಕಿಮೀ ಉದ್ದದ ಸಮುದ್ರ ಕೊರೆತ ಪ್ರತಿಬಂಧಕ ತಡೆಗೋಡೆ ನಿರ್ಮಾಣಕ್ಕೆ 17.25 ಕೋಟಿ ರೂ. ಮೊತ್ತದ ಆರು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News