ವಿಧಾನಸಭೆಯಲ್ಲಿ ವಿಧೇಯಕಗಳಿಗೆ ಅಂಗೀಕಾರ
Update: 2021-12-20 23:55 IST
ಬೆಳಗಾವಿ, ಡಿ.20: 2021ನೇ ಸಾಲಿನ ಕರ್ನಾಟಕ ನಗರ ಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ, 2021ನೇ ಸಾಲಿನ ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ, 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ ಹಾಗೂ 2021ನೇ ಸಾಲಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿತು.