×
Ad

ಪ್ರೀತಿಗೆ ಮನೆಯವರ ವಿರೋಧ: ಎಸೆಸೆಲ್ಸಿ ವಿದ್ಯಾರ್ಥಿನಿ, ಯುವಕ ಆತ್ಮಹತ್ಯೆ

Update: 2021-12-21 10:50 IST

ರಾಮನಗರ, ಡಿ.21: ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಯುವಕನೋರ್ವನ ಮೃತದೇಹಗಳು ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಾಮದೇವರ ಬೆಟ್ಟದ ತಪ್ಪಲಿನಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದು ವರದಿಯಾಗಿದೆ.

ಮೃತರನ್ನು ಚಾಮುಂಡೇಶ್ವರಿ ನಗರದ ನಿವಾಸಿ ಹರೀಶ್(26) ಹಾಗೂ ಗುಡ್ಡದಹಳ್ಳಿ ಗ್ರಾಮದ ಕಾವ್ಯಾ(16) ಎಂದು ಗುರುತಿಸಲಾಗಿದೆ. ಕಾವ್ಯಾ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಹರೀಶ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇವರ ಮೃತದೇಹಗಳು ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಬ್ಬರು ಪ್ರೇಮಿಗಳಾಗಿದ್ದರೆನ್ನಲಾಗಿದ್ದು, ಇವರ ಪ್ರೀತಿಗೆ ಮನೆಯಲ್ಲಿ ವಿರೋಧ ಇತ್ತೆನ್ನಲಾಗಿದೆ. ಇದೇ ಕಾರಣಕ್ಕೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಈ ಬಗ್ಗೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News