ಮೂಡುಬಿದಿರೆ: ವಿಷ ಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ
Update: 2021-12-21 11:21 IST
ಮೂಡುಬಿದಿರೆ, ಡಿ.21: ವ್ಯಕ್ತಿಯೋರ್ವ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿಜನಬೆಟ್ಟು ಎಂಬಲ್ಲಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಪಂಜುರ್ಲಿಗುಡ್ಡೆ ನಿವಾಸಿ ರಾಮ ಗೌಡ ಎಂಬವರ ಪುತ್ರ ಸದಾನಂದ ಗೌಡ(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕಿಜನಬೆಟ್ಟು ಎಂಬಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಸದಾನಂದ ಅಲ್ಲಿಯೇ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ಕಳೆದೆರಡು ದಿನಗಳಿಂದ ಮಾನಸಿಕವಾಗಿ ನೊಂದಿದ್ದರೆನ್ನಲಾಗಿದೆ.
ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.