ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಪಾಕಿಸ್ತಾನ ಕ್ರಿಕೆಟಿಗ ಯಾಸಿರ್ ಶಾ ವಿರುದ್ಧ ಎಫ್ ಐಆರ್: ವರದಿ
ಲಾಹೋರ್: 14 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಕಿರುಕುಳಕ್ಕೆ ನೆರವು ನೀಡಿದ ಆರೋಪದಲ್ಲಿ ಇಸ್ಲಾಮಾಬಾದ್‌ನ ಶಾಲಿಮಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಪಾಕಿಸ್ತಾನ ಕ್ರಿಕೆಟಿಗ ಯಾಸಿರ್ ಶಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ದಾಖಲಾದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಯಾಸಿರ್ ಷಾ ಸ್ನೇಹಿತ ಫರ್ಹಾನ್ ತನಗೆ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ ಎಂದು ಜಿಯೋ.ಟಿವಿ ವರದಿ ಮಾಡಿದೆ. ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಯಾಸಿರ್ ಶಾ ತನಗೆ ಎಚ್ಚರಿಸಿದ್ದಾಗಿ ಬಾಲಕಿ ಹೇಳಿದ್ದಾಳೆ.
"ಯಾಸಿರ್ ಶಾ ಅತ್ಯಂತ ಪ್ರಭಾವಿ ವ್ಯಕ್ತಿ ಹಾಗೂ ತನಗೆ ಪ್ರಮುಖ ಅಧಿಕಾರಿಯ ಪರಿಚಯವಿದೆ ಎಂದು ಹೇಳಿದ್ದಾರೆ. ಯಾಸಿರ್ ಶಾ ಹಾಗೂ ಫರ್ಹಾನ್ ಅತ್ಯಾಚಾರ ದೃಶ್ಯದ ವೀಡಿಯೊಗಳನ್ನು ಮಾಡಿದ್ದಾರೆ ಹಾಗೂ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಸಿದ್ದಾರೆ. ಕೃತ್ಯಕ್ಕೆ ಯಾಸಿರ್ ನೆರವು ನೀಡಿದ್ದಾನೆ " ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಯಾಸಿರ್ ಶಾ ಪಾಕಿಸ್ತಾನದ ಪರ 46 ಟೆಸ್ಟ್‌ಗಳನ್ನು ಆಡಿದ್ದಾರೆ. ಒಟ್ಟು 235 ವಿಕೆಟ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.