×
Ad

ಇನ್ನು ಮುಂದೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ

Update: 2021-12-21 14:23 IST

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಇನ್ನು ಮುಂದೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕರ್ತವ್ಯ ನಿರ್ಹಹಿಸಲು ಅವಕಾಶ ಇದ್ದು, ಇಲಾಖೆಯ ಪ್ರತಿ ವಿಭಾಗದಲ್ಲಿಯೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಮೀಸಲಾತಿ ನೀಡಲಾಗಿದೆ.

ಈ ಕುರಿತು ಸೋಮವಾರ ಹೊರಡಿಸಿದ ಅಧಿಸೂಚನೆಯಂತೆ ಕೆಎಸ್‌ಪಿಯಿಂದ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು, ಲಿಂಗತ್ವ ಅಲ್ಪಸಂಖ್ಯಾತರಿಗೂ ಅರ್ಜಿಗಳನ್ನು ಕರೆಯಲಾಗಿದೆ. 

ಇನ್ನು ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ''ಹೌದು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಎಲ್ಲರಿಗೂ ಸಮಾನ ಅವಕಾಶ ನೀಡುವ ಸಂಸ್ಥೆಯಾಗಿದೆ. ನಾವು ಪುರುಷರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಮಖ್ಯಾತರನ್ನೂ ಸಹ ನೇಮಕ ಮಾಡುತ್ತಿದ್ದೇವೆ'' ಎಂದು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News