ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ: ಬಿ.ಕೆ ಹರಿಪ್ರಸಾದ್
Update: 2021-12-21 14:57 IST
ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ತರಲು ಹೊರಟಿದ್ದು, ಸರಕಾರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಇದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವುದಕ್ಕೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿ ಕೊಡುವುದಿಲ್ಲ, ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ. ಅದಕ್ಕೆ ಮೊದಲು ಅವರು ಉತ್ತರ ಕೊಡಲಿ ಎಂದು ಹೇಳಿದರು.
ಮಹಾರಾಷ್ಟ್ರದ ಗೃಹ ಮಂತ್ರಿಯವರು ಬೆಳಗಾವಿಯಲ್ಲಿ ಎರಡು ದಿನಗಳು ತಂಗಿದ್ದರು. ಆದರೆ ಇದರ ಬಗ್ಗೆ ನಮ್ಮ ಗೃಹ ಸಚಿವರಿಗೆ ಮಾಹಿತಿಯೇ ಇಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.
ಬೆಳಗಾವಿಯಲ್ಲಿ ನಡೆದ ಅಹಿತಕರ ಘಟನೆಯ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದರು.