ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ
Update: 2021-12-21 15:32 IST
ಬೆಳಗಾವಿ, ಡಿ.21: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕವಾಗಿ ಗುಂಪು ಸೇರುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೋವಿಡ್, ಒಮೈಕ್ರಾನ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಇಂದು ಅಪರಾಹ್ನ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಮಾಧ್ಯಮದವರಿಗೆ ಈ ಮಾಹಿತಿ ಹಂಚಿಕೊಂಡರು.
ಡಿ.30ರಿಂದ ಜನವರಿ 2ರವವರೆಗೆ ರಾಜ್ಯಾದ್ಯಂತ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಕೋವಿಡ್ ಮತ್ತು ಒಮೈಕ್ರಾನ್ ಪರಿಸ್ಥಿತಿ ಅವಲೋಕಿಸಿ ತಜ್ಞರ ಶಿಫಾರಸಿನಂತೆ ಈ ಮಾರ್ಗಸೂಚಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.
ಅಪಾರ್ಟ್ ಮೆಂಟ್ ಗಳಲ್ಲು ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜಿಸುವಂತಿಲ್ಲ. ಅದೇರೀತಿ ಕ್ರಿಸ್ಮಸ್ ಹಬ್ಬ ವೇಳೆ ಬಹಿರಂಗವಾಗಿ ಪಾರ್ಟಿ ಆಯೋಜಿಸುವಂತಿಲ್ಲ. ಆದರೆ ಸುರಕ್ಷಿತ ಅಂತರ ಕಾಯ್ದುಕೊಂಡು ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಮುಖ್ಯಮಂತ್ರಿ ವಿವರಿಸಿದರು.