ಮಂಗಳೂರಿನಲ್ಲಿ ನೀರಿನ ಸಮಸ್ಯೆ : ತುಂಬೆ ಜಾಕ್‌ವೆಲ್ ಕಾಮಗಾರಿ ಸ್ಥಗಿತ
Update: 2021-12-21 22:46 IST
ಮಂಗಳೂರು, ಡಿ.21: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಎದುರಾಗುತ್ತಿದ್ದ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ತುರ್ತು ಸಭೆ ನಡೆಸಿ ತುಂಬೆಯಲ್ಲಿನ ಜಾಕ್‌ವೆಲ್ ಕಾಮಗಾರಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿತು.
ಅಲ್ಲದೆ ಪಾಲಿಕೆ ವ್ಯಾಪ್ತಿಯಲ್ಲಿ ಗೈಲ್ ಸಂಸ್ಥೆಯವರು ನಗರದಲ್ಲಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸುವ ಕುರಿತು ಅಧಿಕಾರಿಗಳಿಗೆ ಮೇಯರ್ ಸೂಚನೆ ನೀಡಿದರು.
ಸಭೆಯಲ್ಲಿ ಆಯುಕ್ತ ಅಕ್ಷಯ್ ಶ್ರೀಧರ್, ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕಿರಿಯ ಅಭಿಯಂತರರು ಉಪಸ್ಥಿತರಿದ್ದರು