ಚಿಕ್ಕಬಳ್ಳಾಪುರದಲ್ಲಿ 3.3 ತೀವ್ರತೆಯ ಭೂಕಂಪ

Update: 2021-12-22 04:22 GMT

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಬುಧವಾರ ಬೆಳಗ್ಗೆ ಎರಡು ಬಾರಿ ಭೂಮಿ ನಡುಗಿನ ಅನುಭವವಾಗಿದೆ. ರಿಕ್ಟರ್ ಮಾಪನದಲ್ಲಿ 3.1 ಹಾಗೂ 3.3 ತೀವ್ರತೆಯಲ್ಲಿ ಭೂಮಿ ನಡುಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ತಾಲ್ಲೂಕಿನ ಮಂಡಿಕಲ್ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಹೊಸಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡಹಳ್ಳಿ, ಭೋಗಪರ್ತಿ, ಮುದ್ದೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಬಂಡಹಳ್ಳಿ, ಆರೂರು ಸುತ್ತಮುತ್ತ ಇಂದು ಬೆಳಗ್ಗೆ 7.10ರ ಸುಮಾರಿಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದವು ಎಂದು ಇಲ್ಲಿನ ನಿವಾಸಿಗಳು ತಮ್ಮ ಅನುಭವ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News