ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಒತ್ತಾಯ: ಡಿ.31ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳಿಂದ ಕರೆ
Update: 2021-12-22 12:51 IST
ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಧ್ವಂಸಗೊಳಿಸಿರುವ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ವಾಟಾಳ್ ನಾಗರಾಜ್ ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಡಿ.29ರಂದು ಅಂತಿಮ ಗಡುವು ನೀಡಿದ್ದು, ಡಿ.31ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ನಿರ್ಧರಿಸಿದೆ. ಸರಕಾರ ಒಂದು ವೇಳೆ ಎಂಇಎಸ್ ಸಂಘನೆಯನ್ನು ನಿಷೇಧಿಸಿದರೆ ಬಂದ್ ವಾಪಸ್ ಪಡರಯಲಾಗುವುದು ಎಂದರು.
ಸುಮಾರು 35 ಸಂಘಟನೆಗಳು ಈ ಬಂದ್ ಗೆ ಬೆಂಬಲಿಸಲಿದ್ದು, ಪಕ್ಷಾತೀತವಾಗಿ ಎಲ್ಲರೂ ಒಟ್ಟಾಗಿ ಈ ಪ್ರತಿಭಟನೆಗೆ ಬೆಂಬಲಿಸುಂತೆ ಕರೆ ನೀಡಿದರು. ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೆ ಬಂದ್ ಇರಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಇತರರಿದ್ದರು.