ಆಲಪ್ಪುಳ: ಬಿಜೆಪಿ ಮುಖಂಡನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಎಸ್ಡಿಪಿಐ ಕಾರ್ಯಕರ್ತರ ಬಂಧನ

Update: 2021-12-22 08:00 GMT
Photo: Twitter

ಅಲಪ್ಪುಳ: ಇಲ್ಲಿನ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಮನ್ನಂಚೇರಿಯ ಐವರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮನ್ನಂಚೇರಿ ನಿವಾಸಿಗಳಾದ ನಿಶಾದ್, ಆಸಿಫ್, ಸುಧೀರ್, ಅರ್ಷದ್ ಮತ್ತು ಅಲಿ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಯಾರೂ ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದು ಬಂದಿದೆ.

ಇವರಿಂದ ನೇರವಾಗಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ಸಿಗಲಿದೆ ಎಂದು ಪೊಲೀಸರು ನಂಬಿದ್ದಾಗಿ mathrubhumi.com ವರದಿ ಮಾಡಿದೆ. ವಶಕ್ಕೆ ಪಡೆದವರು ಆರೋಪಿಗಳಿಗೆ ರಂಜಿತ್ ಮನೆಗೆ ತೆರಳಲು ವಾಹನ ವ್ಯವಸ್ಥೆ ಮಾಡಿ ಸಹಾಯ ಮಾಡಿದ್ದರು ಎನ್ನಲಾಗಿದೆ.

ಇದಕ್ಕೂ ಮುನ್ನ ಅಲಪ್ಪುಳದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಬಳಸಲಾದ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‌ಡಿಪಿಐ ಮತ್ತು ಬಿಜೆಪಿಯ ಹಿರಿಯ ರಾಜಕೀಯ ಮುಖಂಡರ ಎರಡು ಕೊಲೆಗಳು ಕೇರಳದ ಆಲಪ್ಪುಳವನ್ನು ಬೆಚ್ಚಿಬೀಳಿಸಿದೆ. ಜಿಲ್ಲೆಯಲ್ಲಿ ಸದ್ಯ ಬಿಗುವಿನ ವಾತಾವರಣ ಮುಂದುವರಿದಿದೆ.

ಎರಡು ಪ್ರತ್ಯೇಕ ಘಟನೆಗಳಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರನ್ನು ಶನಿವಾರ ರಾತ್ರಿ ಕೇರಳದ ಅಲಪ್ಪುಳದಲ್ಲಿ ದಾಳಿ ಮಾಡಿ ಹತ್ಯೆ ಮಾಡಲಾಗಿತ್ತು. ಬಳಿಕ ಘಟನೆಗೆ ಪ್ರತೀಕಾರವೆಂಬಂತೆ ಬಿಜೆಪಿ ಮುಖಂಡ ರಂಜಿತ್‌ ಶ್ರೀನಿವಾಸನ್‌ ರನ್ನು ಕೊಲೆಗೈಯಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News