×
Ad

ಡಿ.26ರಂದು ಅಖಿಲ ಭಾರತ ಮುಂಡಾಲ ಸಮ್ಮಿಲನ

Update: 2021-12-22 15:06 IST

ಮಂಗಳೂರು, ಡಿ. 22 ಅಖಿಲ ಭಾರತ ಮುಂಡಾಲ ಯುವ ವೇದಿಕೆ ವತಿಯಿಂದ 12ನೇ ವರ್ಷದ ಮುಂಡಾಲ ಸಮ್ಮಿಲನ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಡಿ.26ರಂದು ಸಂಜೆ 4 ಗಂಟೆಗೆ ಜರುಗಲಿದೆ.

ಕಾರ್ಯಕ್ರಮದಲ್ಲಿ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಮುಂಡಾಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಅಭಿನಂದನೆ, 2022ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಗ್ರಾಮೀಣ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಜರುಗಲಿವೆ. ಸಮಾಜ ಬಾಂಧವರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಪ್ರವೀಣ್ ಕಾಟಿಪಳ್ಳ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಭಾ ಕಾರ್ಯಕ್ರಮವನ್ನು ಉಡುಪಿ ಬಾರ್ಕೂರಿನ ಕಚ್ಚೂರು ಮಾಲ್ತಿದೇವಿ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರ ಅಧ್ಯಕ್ಷ ಶಿವಪ್ಪ ನಂತೂರು ಉದ್ಘಾಟಿಸಲಿದ್ದಾರೆ. ಸಚಿವ ಎಸ್.ಅಂಗಾರ, ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ. ವೈ.ಭರತ್ ಶೆಟ್ಟಿ, ಯು.ಟಿ. ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಉಪಾಧ್ಯಕ್ಷರಾದ ಪ್ರದೀಪ್ ಕಾಪಿಕಾಡ್, ಪ್ರದಾನ ಕಾರ್ಯದರ್ಶಿ ರವಿ ಕಾಪಿಕಾಡ್, ಕೋಶಾಧಿಕಾರಿ ವಿನಯನೇತ್ರ ದಡ್ಡಲ್‌ಕಾಡ್, ಸಾಂಸ್ಕೃತಿಕ ಕಾರ್ಯದರ್ಶಿ ಅಜಿತ್ ಕಾಪಿಕಾಡ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News